‘ನಿತ್ಯ ಸಚಿವ’ ಕೆ.ವಿ.ಶಂಕರಗೌಡ ಶಿಕ್ಷಣ ಪ್ರಶಸ್ತಿ ಪ್ರದಾನ ಸಮಾರಂಭ

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಪ್ರಾರಂಭವಾದ ಗ್ರಾಮಭಾರತಿ ವಿದ್ಯಾಸಂಸ್ಥೆ ಕಳೆದ 50 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ನೀಡುತ್ತಿರುವ ಸೇವೆಯನ್ನು ಪರಿಗಣಿಸಿ 2025-26ನೇ ಸಾಲಿನ ನಂಜಮ್ಮ ಮೋಟೇಗೌಡ ಚಾರಿಟಬಲ್ & ಎಜುಕೇಷನಲ್ ಟ್ರಸ್ಟ್ (ರಿ). ಕೊಪ್ಪ ಇವರು ಕೊಡಮಾಡುವ ‘ನಿತ್ಯಸಚಿವ’ ಕೆ.ವಿ.ಶಂಕರಗೌಡ ಶಿಕ್ಷಣ ಪ್ರಶಸ್ತಿ ಗೆ ಆಯ್ಕೆ ಮಾಡಿರುತ್ತಾರೆ. ಸದರಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿ.30-08-2025 ರ ಶನಿವಾರ ಮಧ್ಯಾಹ್ನ 2-00 ಗಂಟೆಗೆ ಸಂಸ್ಥೆಯ ಸಾಹುಕಾರ್ ಎಸ್.ಸಿ.ಚಿಕ್ಕಣ‍್ಣಗೌಡ ಸಭಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆ.